Slide
Slide
Slide
previous arrow
next arrow

ಯುವ ಮತದಾರರನ್ನು ಗುರುತಿಸಿ : ಇಓ ಸುರೇಶ ನಾಯ್ಕ

300x250 AD

ಹೊನ್ನಾವರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಬಲಿಷ್ಠ ಆಯುಧವಾಗಿದ್ದು, ಜವಾಬ್ದಾರಿಯುತ ಸರ್ಕಾರ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಕಲ್ಪಿಸಲಾಗಿದ್ದು, ಮತದಾರರ ಯಾದಿಯಿಂದ ಹೊರಗುಳಿದಿರುವ ಯುವ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಗೆ ಸೇರಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಸುರೇಶ ನಾಯ್ಕ ತಿಳಿಸಿದರು.

ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾಲೂಕಾ ಆಡಳಿತ, ತಾಲೂಕ ಪಂಚಾಯತ ಮತ್ತು ಸ್ವೀಪ್ ಸಮಿತಿ ಆಶ್ರಯದಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಎನ್‌ಆರ್‌ಎಲ್ಎಮ್ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ಮತದಾನದ ಮಹತ್ವವನ್ನು ತಿಳಿಸುತ್ತ, ಪ್ರತಿ ಸ್ವಸಹಾಯ ಸಂಘಗಳಲ್ಲಿ ಮನವರಿಕೆ ಮಾಡಿಕೊಟ್ಟು, ಮತದಾರರ ಪಟ್ಟಿಯಿಂದ ಹೊರಗುಳಿದ ಯುವಜನತೆಯನ್ನು ಗುರುತಿಸಲು ತಿಳಿಸಿದರು.

300x250 AD

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ತಾಲೂಕ ಮಟ್ಟದ ಒಕ್ಕೂಟದ ಅಧ್ಯಕ್ಷರು, ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು ಹಾಜರಿದ್ದರು.

Share This
300x250 AD
300x250 AD
300x250 AD
Back to top