ಹೊನ್ನಾವರ: ತಾಲೂಕಿನ ಬಂಗಾರಮಕ್ಕಿಯ ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ ಮತ್ತು ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿ ಹಾಗೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಾರುತಿ ಗುರೂಜಿಯವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಕೂಟದ ಪ್ರಾರಂಭವನ್ನು ಘೋಷಿಸಿದರು. ನೆರೆದಿದ್ದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಶುಭಾಶೀರ್ವದಿಸಿದರು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಕೆ.ಪಿ.ಸಿ.ಎಲ್. ಗೇರಸೊಪ್ಪದ ರಾಯಪ್ಪಾ ಎಸ್. ಸಿಂಧೊಳ ಇವರು ವಿದ್ಯಾರ್ಥಿಗಳಿಂದ ಪಥಸಂಚಲನದ ಗೌರವ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಮತ್ತೋರ್ವ ಮುಖ್ಯ ಅತಿಥಿ ಕ್ಷೇತ್ರ ಸಮನ್ವಯಾಧಿಕಾರಿ
ಎಸ್.ಎಮ್.ಹೆಗಡೆ ಕ್ರೀಡಾ ಜ್ಯೋತಿಯನ್ನು ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕ್ರೀಡೆಯ ಮಹತ್ವವನ್ನು ವಿವರಿಸಿ, ಮಕ್ಕಳನ್ನು ಹುರಿದುಂಬಿಸಿದರು.
ಶಾಲೆಯ ಆಡಳಿತ ನಿರ್ದೇಶಕ ಜಿ.ಟಿ.ಹೆಗಡೆ, ಪಾಲಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಾಯಕ ನಾಯ್ಕ, ಪಾಲಕ-ಶಿಕ್ಷಕ ಸಂಘದ ಕಾರ್ಯದರ್ಶಿ ವಿಷ್ಣುಮೂರ್ತಿ ಹೆಗಡೆ, ಶಾಲೆಯ ಪ್ರಾಂಶುಪಾಲ ಎಸ್. ಜೊನ್ ಬೊಸ್ಕೊ ಉಪಸ್ಥಿತರಿದ್ದರು.
ಎರಡು ದಿನಗಳ ಕಾಲ ನಡೆದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಪ್ರಶಸ್ತಿ ಪ್ರದಾನ ಸಮಾರಂಭ:
ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹಮಾನ ವಿತರಿಸಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿ ಹಾಗೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಮಾರುತಿ ಗುರೂಜಿ ವಹಿಸಿದ್ದರು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ. ರಾಘವೇಂದ್ರ ಭಟ್ಟ, ಸಂಸ್ಥೆಯ ಕಾರ್ಯದರ್ಶಿ ಅರ್ಪಿತಾ ಮಾರುತಿ ಗುರೂಜಿ, ಸಂಸ್ಥೆಯ ಆಡಳಿತಾಧಿಕಾರಿ ಮಂಜುನಾಥ ಎಮ್.ಎನ್, ಶಾಲೆಯ ಆಡಳಿತ ನಿರ್ದೇಶಕ ಜಿ.ಟಿ.ಹೆಗಡೆ, ಪಾಲಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಾಯಕ ನಾಯ್ಕ, ಪಾಲಕ-ಶಿಕ್ಷಕ ಸಂಘದ ಕಾರ್ಯದರ್ಶಿ ವಿಷ್ಣುಮೂರ್ತಿ ಹೆಗಡೆ, ಶಾಲೆಯ ಪ್ರಾಂಶುಪಾಲ ಎಸ್. ಜೊನ್ ಬೊಸ್ಕೊ ಉಪಸ್ಥಿತರಿದ್ದರು.