Slide
Slide
Slide
previous arrow
next arrow

ಬಿಜೆಪಿಗೆ ಜಯ : ಹೊನ್ನಾವರದಲ್ಲಿ ಸಂಭ್ರಮ ಆಚರಣೆ

300x250 AD

ಹೊನ್ನಾವರ: ಹೊನ್ನಾವರ ಬಿಜೆಪಿ ಮಂಡಲದ ವತಿಯಿಂದ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿ, ಸಂಭ್ರಮಿಸಲಾಯಿತು‌.

ಮಂಡಲಾಧ್ಯಕ್ಷ ರಾಜೇಶ ಭಂಡಾರಿ ಮಾತನಾಡಿ,
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಗೆದ್ದಿದ್ದು, ಅದನ್ನು ಪಂಚರಾಜ್ಯಗಳಲ್ಲಿ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವೊಂದು ನೂನ್ಯತೆಗಳಿಂದ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಿನ್ನಡೆಯಾಗಿತ್ತು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಅಲೆ ಮತ್ತೆ ಹೆಚ್ಚಾಗಲಿದೆ. ಕಾರ್ಯಕರ್ತರಲ್ಲಿ ಇನ್ನಷ್ಟು ಹುಮ್ಮಸ್ಸು ಬಂದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ವಿಭಾಗ ಸಹಪ್ರಭಾರಿ ಎನ್.ಎಸ್.ಹೆಗಡೆ ಮಾತನಾಡಿ, ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯೇ ಕಾರಣ. ಈ ಚುನಾವಣೆಯ ಫಲಿತಾಂಶ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಗ್ಯಾರಂಟಿ ಎಂಬ ಭರವಸೆ ಮೂಡಿಸಿದೆ ಎಂದರು.

300x250 AD

ಪಕ್ಷದ ಕಾರ್ಯಕರ್ತರು, ಮುಖಂಡರು ಪಟ್ಟಣದ ಶರಾವತಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ ಕೇರಿ, ತಾಲೂಕಾ ಪ್ರಧಾನಕಾರ್ಯದರ್ಶಿ ಮಂಜುನಾಥ ನಾಯ್ಕ, ಸುರೇಶ ಹರಿಕಂತ್ರ, ಪಪಂ ಸದಸ್ಯರಾದ ಭಾಗ್ಯ ಮೇಸ್ತ, ವಿಜಯ ಕಾಮತ, ಸುಜತಾ ಮೇಸ್ತ, ನಿಶಾ ಶೇಟ್, ಪಕ್ಷದ ಮುಖಂಡರಾದ ಶಿವಾನಂದ ಹೆಗೆಡೆ, ಎಂ.ಎಸ್.ಹೆಗೆಡೆ, ಗಣಪತಿ ಬಿ ಟಿ, ಗಣೇಶ ಪೈ, ಹರಿಶ್ಚಂದ್ರ ನಾಯ್ಕ, ವೆಂಕಟೇಶ ಪ್ರಭು, ಪ್ರದೀಪ ಮೇಸ್ತ ಮತ್ತಿತರಿದ್ದರು.

Share This
300x250 AD
300x250 AD
300x250 AD
Back to top