ಬೆಂಗಳೂರು: ವೀಸಾ ಅವಧಿ ಮುಗಿದ ಮೇಲೆಯೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ, ಅವರ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ರಾಜ್ಯದ ಪೆÇಲೀಸ್ ಇಲಾಖೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ರಾಜ್ಯದಲ್ಲಿ ವೀಸಾ ಅವಧಿ ಮುಗಿದ ಮೇಲೆಯೂ ಅಕ್ರಮವಾಗಿ ನೆಲೆಸಿ, ಕಾನೂನು ವಿರೋಧಿ ಚಟುವಟಿಕೆಗಳನ್ನು, ದೇಶ ವಿದ್ರೋಹಿ ಕೃತ್ಯಗಳನ್ನು, ಸಮಾಜ ವಿರೋಧಿ ಕೆಲಸಗಳನ್ನು ಮಾಡುತ್ತಿದ್ದರೆ ಅವರ ಮೇಲೆ ನಿಗಾ ವಹಿಸಬೇಕು. ಹಾಗೆಯೇ ಅವರ ಬಗ್ಗೆ ಪ್ರತೀ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ದಾಖಲಾತಿಗಳ ನಿರ್ವಹಣೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.
ಅಫ್ಘಾನಿಸ್ಥಾನದ ರಾಜಕೀಯ, ಸಾಮಾಜಿಕ ಪರಿಸ್ಥಿತಿಗಳಲ್ಲಾದ ವ್ಯತ್ಯಾಸದ ಬಳಿಕ, ರಾಜ್ಯದಲ್ಲಿ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು, ಅವರಿಂದ ಯಾವುದೇ ರೀತಿಯ ಕಾನೂನು ಭಂಗ, ಅಶಾಂತಿ ಸೃಷ್ಟಿಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.