ಅಂಕೋಲಾ : ತಾಲೂಕಿನ ಬಬ್ರುವಾಡ ಬೇಳಾಬಂದರದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಬೇಳಾ ಬಂದರ ಶಾಲೆಯಲ್ಲಿ ನಡೆಯಿತು.
ಕರಾವಳಿ ಮುಂಜಾವು ಪತ್ರಕರ್ತ ಸುಭಾಷ ಕಾರೇಬೈಲ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಶಾಲೆಯ ಅಮೃತ ಮಹೋತ್ಸವ ಒಂದು ವಿಶೇಷ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕು.ಅಮೃತ ಮಹೋತ್ಸವಕ್ಕೆ ಇಲ್ಲಿಯ ಸುಸಂಸ್ಕೃತ ಮನಸ್ಸುಗಳು, ಹಳೆಯ ವಿದ್ಯಾರ್ಥಿಗಳು ಜೊತೆಯಾಗಿ ಯಶಸ್ವಿಗೊಳಿಸಿ. ನಿಮ್ಮ ಜೊತೆ ನಾವಿದ್ದೇವೆ ಎಂದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ರವಿ ಬೊಮ್ಮಯ್ಯ ನಾಯ್ಕ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಡಿಸೆಂಬರ್ 22 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದ್ದು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ನಂತರ ರಾತ್ರಿ 7:00 ಗಂಟೆಗೆ ಶಾಲಾ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 23 ಶನಿವಾರ ಬೆಳಗ್ಗೆ 9:00ಗೆ ಗುರುವಂದನಾ ಕಾರ್ಯಕ್ರಮ, 10 ಗಂಟೆಗೆ ವಸ್ತು ಪ್ರದರ್ಶನ ಮತ್ತು 11:00ಗೆ ವೇದಿಕೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ
ಡಿಸೆಂಬರ್ 23 ಶನಿವಾರ ಸಂಜೆ 05 ಗಂಟೆಗೆ ಸಮಾರೋಪ ಸಮಾರಂಭ ನಂತರ ರಾತ್ರಿ ಎಂಟು ಗಂಟೆಯಿಂದ ಭಟ್ಕಳದ ಫ್ರೆಂಡ್ಸ್ ಮೆಲೋಡಿ ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಂಜುನಾಥ ಡಿ ನಾಯ್ಕ ಮಾತನಾಡಿ ಎಲ್ಲರ ಸಹಕಾರ ಕೋರಿದರು. ನ್ಯಾಯವಾದಿ ಉಮೇಶ ನಾಯ್ಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಅನಿಲ ಆರ್. ನಾಯ್ಕ, ದುರ್ಗಾನಂದ ಜಿ. ನಾಯ್ಕ, ಮೋಹನ ಬಿ. ನಾಯ್ಕ, ಗೋಪಾಲ ಕೆ. ನಾಯ್ಕ, ಚಂದ್ರಕಾಂತ ಪೀರನಕರ, ಶಿಕ್ಷಕಿ ವಿನುತಾ ನಾಯಕ, ಸುವರ್ಣಾ ನಾಯಕ, ಸುಮನಾ ನಾಯಕ, ವಂದನಾ ನಾಯ್ಕ, ಎಸ್ ಡಿ ಎಮ್ ಸಿ ಅಧ್ಯಕ್ಷ ರತ್ನಾಕರ ಕೆ. ನಾಯ್ಕ ಉಪಸ್ಥಿತರಿದ್ದರು.
ಅಮೃತ ಮಹೋತ್ಸವದ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಶಿಕ್ಷಣ ಸಚಿವ ಮದು ಬಂಗಾರಪ್ಪ ಉದ್ಘಾಟಿಸಲಿದ್ದು,ಸ್ಮರಣ ಸಂಚಿಕೆಯನ್ನು ಉಸ್ತುವಾರಿ ಸಚಿವ ಮಂಕಾಳು ವೈದ್ಯ ಬಿಡುಗಡೆಗೊಳಿಸಲಿದ್ದಾರೆ..ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಆರ್. ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ, ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ್, ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.