Slide
Slide
Slide
previous arrow
next arrow

ಮತ್ಸ್ಯಕ್ಷಾಮ: 15 ದಿನಗಳಿಂದ ಖಾಲಿ ಬರುತ್ತಿರುವ ಆಳಸಮುದ್ರದ ಬೋಟುಗಳು

300x250 AD

ಕಾರವಾರ: ಕರಾವಳಿಯಲ್ಲಿ ಮೀನುಗಾರರು ಸರ್ಕಾರದ ಆದೇಶದಂತೆ ಅಗಸ್ಟ್ 1 ರಿಂದ ಮೀನುಗಾರಿಕೆ ಆರಂಭಿಸಿದ್ದು ಆರಂಭದಲ್ಲಿ ಉತ್ತಮ ಮೀನುಗಾರಿಕೆಯೂ ನಡೆದಿತ್ತು. ಆದರೆ ಇದೀಗ ಕಳೆದ 15 ದಿನಗಳಿಂದ ಆಳಸಮುದ್ರಕ್ಕೆ ತೆರಳಿದರೂ ಸಹ ಬೋಟುಗಳಿಗೆ ಮೀನುಗಳೇ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಆಳಸಮುದ್ರಕ್ಕೆ ಒಂದು ಬಾರಿ ಮೀನುಗಾರಿಕೆಗೆ ತೆರಳಲು ಒಂದು ಬೋಟಿಗೆ ಡೀಸೆಲ್, ಕಾರ್ಮಿಕರು ಸೇರಿದಂತೆ ಸುಮಾರು 40 ರಿಂದ 50 ಸಾವಿರ ರೂಪಾಯಿ ಖರ್ಚಾಗುತ್ತದೆ. ಆದರೆ ಸಮುದ್ರದಲ್ಲಿ ಕೇವಲ 15 ರಿಂದ 20 ಸಾವಿರ ರೂಪಾಯಿ ಆಗುವಷ್ಟು ಮಾತ್ರ ಮೀನುಗಳು ಸಿಗುತ್ತಿದ್ದು ಇದರಿಂದ ಮೀನುಗಾರರು ನಷ್ಟ ಅನುಭವಿಸುವಂತಾಗಿದೆ. ಮೀನುಗಾರಿಕೆಗೆ ಮಾಡಿದ ಖರ್ಚು ಸಹ ಪೂರೈಸದ ಮಟ್ಟಿಗೆ ಮೀನುಗಾರಿಕೆ ನಷ್ಟ ಅನುಭವಿಸುತ್ತಿದ್ದು ಹೀಗಾಗಿ ಮೀನುಗಾರರು ಮೀನುಗಾರಿಕೆಗೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿ ನಿಲ್ಲುವಂತಾಗಿದೆ.

ಪ್ರತಿವರ್ಷ ಈ ಅವಧಿಯಲ್ಲಿ ಬಂಗುಡೆ, ಸೀಗಡಿ, ಲೆಪ್ಪೆ, ಪಾಪ್ಲೆಟ್ ಸೇರಿದಂತೆ ಸಾಕಷ್ಟು ಮೀನುಗಳು ಸಿಗುತ್ತಿದ್ದವು. ಇದರಿಂದ ಸಾಲ ಮಾಡಿ ಮೀನುಗಾರಿಕೆ ಆರಂಭಿಸಿದ್ದ ಮೀನುಗಾರರು ಉತ್ತಮ ಮೀನುಗಾರಿಕೆ ನಡೆಸುವ ಮೂಲಕ ಹೆಚ್ಚಿನ ಆದಾಯ ಗಳಿಸಿ ಸಾಲ ತೀರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಮೀನುಗಾರಿಕೆ ಆರಂಭವಾದ ನಾಲ್ಕೇ ತಿಂಗಳಲ್ಲೇ ಮತ್ಸ್ಯಕ್ಷಾಮ ಪರಿಸ್ಥಿತಿ ನಿರ್ಮಾಣವಾಗಿದ್ದು ಬೋಟ್ಗೆಗ ವ್ಯಯಿಸುವ ಡೀಸೆಲ್ ವೆಚ್ಛವೂ ಸಹ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮೀನುಗಾರರೂ ಸಹ ಮೀನುಗಾರಿಕೆ ಸ್ಥಗಿತಗೊಳಿಸಿ ಕೂಲಿ ಕೆಲಸಕ್ಕೆ ತೆರಳಬೇಕಾದ ಸ್ಥಿತಿ ಎದುರಾಗಿದೆ ಅಂತಾರೇ ಮೀನುಗಾರರು. ಇನ್ನು ಅವಧಿ ಪೂರ್ವಮತ್ಸ್ಯಕ್ಷಾಮದಿಂದಾಗಿ ಮೀನುಗಾರರು ಸಂಕಷ್ಟ ಅನುಭವಿಸುವಂತಾಗಿದ್ದು ಸರ್ಕಾರ ಬೆಳೆ ಹಾನಿಗೆ ರೈತರಿಗೆ ನೀಡುವಂತೆ ಮೀನುಗಾರರಿಗೂ ಪರಿಹಾರ ಒದಗಿಸಬೇಕು ಎನ್ನುತ್ತಾರೆ ಮೀನುಗಾರ ಮುಖಂಡರು.

300x250 AD

Share This
300x250 AD
300x250 AD
300x250 AD
Back to top