ಕಾರವಾರ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃಧ್ಧಿ ನಿಗಮದ ವತಿಯಿಂದ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ಕೌಶಲ್ಯಭಿವೃದ್ಧಿ ತರಬೇತಿ ನೀಡಲು ಮಾನ್ಯತೆ ಪಡೆದೆ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.
ಅಕ್ರೆಡಿಟೆಷನ್ ಹೊಂದಿರುವ ಅರ್ಹ ಸಂಸ್ಥೆಯು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದ್ವಿಪ್ರತಿಯಲ್ಲಿ ಡಿ.16 ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ ಎದುರುಗಡೆ, ಬೀಚ್ ರೋಡ್, ಕಾರವಾರ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ದೂ. TEL:+9108382226167 ನ್ನು ಸಂಪರ್ಕಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.