Slide
Slide
Slide
previous arrow
next arrow

ಅಥ್ಲೆಟಿಕ್ ಕ್ರೀಡಾಕೂಟ; ಡಿಸ್ಕಸ್ ಎಸೆತದಲ್ಲಿ ನಿವೇದಿತಾ ಪ್ರಥಮ

300x250 AD

ಕಾರವಾರ: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸೆ.6ರಿಂದ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ನಡೆದ ಮುಕ್ತ ಅಥ್ಲೆಟಿಕ್ ಕ್ರೀಡಾಕೂಟದ ಡಿಸ್ಕಸ್ ಎಸೆತದಲ್ಲಿ ಕಾರವಾರದ ನಿವೇದಿತಾ ಸಾವಂತ 40.52 ಮೀ. ದೂರ ಡಿಸ್ಕ್ ಎಸೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಮೂಲಕ ಸೆ.15ರಿಂದ ತೆಲಂಗಾಣದ ವಾರಂಗಲ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಮಹಿಳೆಯರ ಮುಕ್ತ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದ ಹ್ಯಾಮರ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

300x250 AD

ನಿವೇದಿತಾ ಕ್ರೀಡಾ ಕೋಟಾದ ಅಡಿಯಲ್ಲಿ ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು, ಪ್ರಸ್ತುತ ಟಿಸಿಎಸ್ ನಲ್ಲಿ ಉದ್ಯೋಗಿಯಾಗಿದ್ದಾರೆ.

Share This
300x250 AD
300x250 AD
300x250 AD
Back to top