Slide
Slide
Slide
previous arrow
next arrow

ಅರ್ಹರಿಗೆ ಪಡಿತರ ಚೀಟಿ ವಿತರಿಸಲು ಕ್ರಮವಹಿಸಲು ಡಿಸಿ ಸೂಚನೆ

300x250 AD

ಕಾರವಾರ: ಜಿಲ್ಲೆಯಲ್ಲಿ ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲು ಕ್ರಮವಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿರುವ ಪಡಿತರ ಚೀಟಿಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದು ಪಡಿಸಿ ಅರ್ಹರಿಗೆ ಪಡಿತರ ಚೀಟಿಗಳನ್ನು ವಿತರಿಸಬೇಕು ಹಾಗೂ ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ಬದಲಾಗಿ ಡಿಬಿಟ್ ಮೂಲಕ ಹಣ ಪಾವತಿಯಾಗದೆ ಇರುವ ಪಡಿತರ ಚೀಟಿಗಳನ್ನು ಪರಿಶೀಲಿಸಿ ಪಡಿತರದಾರರಿಗೆ ಹಣ ಪಾವತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಎನ್ಪಿಸಿಐ ಫೆಲ್ಯೂರ್ ಮತ್ತು ಆಧಾರ ಸಿಡೀಂಗ್ ಡೀಲಿಂಕ್ ಆಗುತ್ತಿರುವ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಬ್ಯಾಂಕ್ಗಳು ಸಹಕಾರ ನೀಡಲು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಬ್ಯಾಂಕ್ಗಳಿಗೆ ಸೂಚನೆ ನೀಡುಂತೆ ತಿಳಿಸಿದರು.

ತಾಲ್ಲೂಕುಗಳಲ್ಲಿ ಪಡಿತರ ಅಕ್ಕಿಯ ದುರುಪಯೋಗವಾಗುತ್ತಿರುವ ಬಗ್ಗೆ ಪತ್ತೆ ಹಚ್ಚುವಂತೆ ಅಧಿಕಾರಗಳಿಗೆ ಸೂಚಿಸಿದ ಅವರು, ಸಗಟು ಮಳಿಗೆದಾರರಿಗೆ ಆಹಾರಧಾನ್ಯದ ಗುಣಮಟ್ಟ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಹೇಳಿದರು. ಸಗಟು ಸಾಗಾಣಿಕೆ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಪಡಿತರ ಆಹಾರಧಾನ್ಯವನ್ನು ಎತ್ತುವಳಿ ಮಾಡಿ ವಿತರಣೆ ಮಾಡಬೇಕು ಮತ್ತು ಪ್ರತಿ ಮಾಹೆ ಸೀಮೆಎಣ್ಣೆ ಎತ್ತುವಳಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ 4338 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದ್ದು, ರೂ. 46,29,100 ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ ಮಾಹಿತಿ ನೀಡಿದರು.

300x250 AD

ಸಭೆಯಲ್ಲಿ ಜಿಲ್ಲಾ ಖಜಾನೆಯ ಉಪ ನಿರ್ದೇಶಕರು, ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿ, ಆಹಾರ ನಿರೀಕ್ಷಕರು, ಸಗಟು ಗೋದಾಮು ವ್ಯವಸ್ಥಾಪಕರು, ಸಗಟು ಸಾಗಾಣಿಕೆ ಗುತ್ತಿಗೆದಾರರು ಇದ್ದರು.

Share This
300x250 AD
300x250 AD
300x250 AD
Back to top