Slide
Slide
Slide
previous arrow
next arrow

ಡಿ.13 ರಂದು ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ಕಾರ್ಯಕ್ರಮ

300x250 AD

ಕಾರವಾರ: ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ಕಾರ್ಯಕ್ರಮವು ಡಿ.13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೊಯಿಡಾ ತಾಲ್ಲೂಕು ಸಭಾ ಭವನದಲ್ಲಿ ನಡೆಯಲಿದೆ.

 ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರುಗಳನ್ನು ಸ್ವೀಕಾರ ಮಾಡಿ, ವಿಚಾರಣೆ ನಡೆಸುವರು. ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ನಮೂನೆ-1 ಮತ್ತು 2 ರಲ್ಲಿ ಭರ್ತಿಮಾಡಿ ನೀಡಬಹುದು. ಸಾರ್ವಜನಿಕರು ತಮ್ಮ ದೂರುಗಳು ಇದ್ದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಲು ತಿಳಿಸಿದ್ದಾರೆ.

300x250 AD

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ TEL:+9108382295293, TEL:+9108382220198, TEL:+9108382222250, TEL:+9108382222022,TEL:+9108382229988, ಗೆ ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಪೊಲೀಸ್ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This
300x250 AD
300x250 AD
300x250 AD
Back to top