Slide
Slide
Slide
previous arrow
next arrow

ಸತತ ಪ್ರಯತ್ನ, ನಿರಂತರ ಅಧ್ಯಯನದಿಂದ ಯಾವುದೇ ಕಾರ್ಯ ಯಶಸ್ವಿ: ಹರಿಪ್ರಕಾಶ ಕೋಣೆಮನೆ

300x250 AD

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಅತ್ಯಂತ ಸುಸಜ್ಜಿತವಾಗಿ, ವ್ಯವಸ್ಥಿತವಾಗಿ ರೂಪಗೊಂಡು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಗಮನಾರ್ಹ ಸಂಗತಿ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಭವ್ಯಾ.ಸಿ ಹೇಳಿದರು.

ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಪ್ರಾಂಶುಪಾಲ ಶ್ರೀರಂಗ ಕಟ್ಟಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರದ್ಧೆ ,ಸಮಯ ಪಾಲನೆ , ದೂರದೃಷ್ಟಿ ,ಸತತ ಪ್ರಯತ್ನ ಮತ್ತು ನಿರಂತರ ಅಧ್ಯಯನದಿಂದ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಶಿಕ್ಷಕರು ಪ್ರಚಲಿತ ವಿದ್ಯಮಾನಗಳೊಂದಿಗೆ ಸದಾ ಸಂಪರ್ಕದಲ್ಲಿದ್ದು ವಿದ್ಯಾರ್ಥಿಗಳ ಜ್ಞಾನಕ್ಕೆ ಪೂರಕವಾದ ಶಿಕ್ಷಣವನ್ನು ನೀಡಬೇಕು ಎಂದರು.
ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಪ್ರಶಿಕ್ಷಣಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್ ಎಲ್ ಭಟ್ಟ,
ಸಂಸ್ಥೆಯ ವ್ಯವಸ್ಥಾಪಕ ಅಜಯ ಭಾರತೀಯ ಉಪಸ್ಥಿತರಿದ್ದರು. ಉಪನ್ಯಾಸಕರಾದ ಸೀತಾರಾಮ ಗೌಡ, ಗೀತಾ ನಾಯಕ, ಬಿ.ಎನ್. ಭಟ್ ವಂದನಾರ್ಪಣೆ ನಿರ್ವಹಿಸಿದರು.

300x250 AD
Share This
300x250 AD
300x250 AD
300x250 AD
Back to top