Slide
Slide
Slide
previous arrow
next arrow

ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ.:- ಹಳಿಯಾಳದ ಕೆನರಾ ಬ್ಯಾಂಕ್ ದೇಶಪಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ “ಟಿವಿ ಟೆಕ್ನಿಷಿಯನ್, ಮೊಬೈಲ್ ರಿಪೇರಿ, ಸೊಲಾರ್ ಟೆಕ್ನಿಷಿಯನ್, ಕುರಿ ಸಾಕಾಣಿಕೆ, ಹೌಸ್ ವೈರಿಂಗ್, ಜೆಸಿಬಿ ಅಪರೇಟರ್” ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿದ್ದು, ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ತರಬೇತಿಯನ್ನು ನೀಡಲಾಗುವುದು.

300x250 AD

ಆಸಕ್ತ ಅಭ್ಯರ್ಥಿಗಳು ಡಿ.20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಗೆ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: Tel:+918217236973,Tel:+919844796998, Tel:+918970145354, Tel:+919482188780, ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top