Slide
Slide
Slide
previous arrow
next arrow

‘ಪಿಡಿಒ ಆಫ್ ದಿ ಮಂತ್’ ಪ್ರಶಸ್ತಿಗೆ ಕಾರವಾರದ ಪ್ರಭಾವತಿ ಬಂಟ್ ಭಾಜನ

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ನವೆಂಬರ್ ತಿಂಗಳ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನಾರದ ಕಾರವಾರ ತಾಲ್ಲೂಕಿನ ಕಡವಾಡ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ  ಪ್ರಭಾವತಿ ಎಂ. ಬಂಟ್ ರವರಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸೋಮವಾರ  ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು.

ಪ್ರಶಸ್ತಿ ಪುರಸ್ಕೃತರಾದ ಪಿಡಿಒ ಪ್ರಭಾವತಿ ಬಂಟ ಮಾತನಾಡಿ, ವಿಕೇಂದ್ರೀಕರಣ ವ್ಯವಸ್ಥೆಯಡಿ ಸ್ಥಾಪಿತವಾದ ಗ್ರಾಮ ಪಂಚಾಯತ್‌ ಗ್ರಾಮೀಣ ಜನರಿಗೆ ಅತೀ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತ ಮಹತ್ತರ ಪಾತ್ರವಹಿಸುತ್ತಿದೆ. ಇಲ್ಲಿ ಮೇಲಾಧಿಕಾರಿಗಳ ಮಾರ್ಗದರ್ಶನ, ಚುನಾಯಿತ ಜನಪ್ರತಿನಿಧಿಗಳ ಸಹಕಾರ, ಸಿಬ್ಬಂದಿ ವರ್ಗದವರ ಕಾರ್ಯ ನಿರ್ವಹಣೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ. ಈ ಮೂಲಕ ನನ್ನ ಸೇವೆಯನ್ನು ಗುರುತಿಸಿ ಇನ್ನೂ ಹೆಚ್ಚಿನದಾಗಿ ಸಾರ್ವಜನಿಕ ಸೇವೆ  ಸಲ್ಲಿಸುವ ಅವಕಾಶ ಒದಗಿಸಿದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಧನ್ಯವಾಗಳು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಹಾಗೂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿಗಳಾದ ನಾಗೇಶ್ ರಾಯ್ಕರ್, ಎನ್.ಜಿ. ನಾಯಕ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

300x250 AD

 ಪ್ರಭಾವತಿ ಬಂಟ್ ಅವರು ಎಂಎ, ಬಿಎಡ್ ಪದವಿದರರಾಗಿದ್ದು, 2010ರಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಪ್ರಾರಂಭಿಸಿದ್ದಾರೆ. ಕಾರವಾರ ತಾಲ್ಲೂಕಿನ ಕಡವಾಡ ಗ್ರಾಮ ಪಂಚಾಯತಿಯು ಶ್ರೀಮತಿ ಪ್ರಭಾವತಿ ಬಂಟ ಅವರ ಕಾರ್ಯಾವಧಿಯಲ್ಲಿ 2017-18ರಲ್ಲಿ ಎಲ್ಲಾ ಮನೆಗಳಿಗೆ ಶೌಚಾಲಯ ನೀಡಿ 2023ರಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆಯಲ್ಲಿ ಜಿಲ್ಲಾ ಪಂಚಾಯತ್‌ನಿಂದ ನೀಡಲಾದ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. ಅದಲ್ಲದೇ ವಿವಿಧ ಯೋಜನೆಗಳಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಾಲೆ, ಗ್ರಾಂಥಾಲಯ ಡಿಜಿಟಲೀಕರಣ, ಅಂಗನವಾಡಿ, ಶೌಚಾಲಯ,  ಶಾಲಾ ಕಾಂಪೌಂಡ್, ತ್ಯಾಜ್ಯ ವಿಲೇವಾರಿ ಘಟಕ, ಅಮೃತ ಸರೋವರ ನಿರ್ಮಾಣ, ಸೌರ ವಿದ್ಯುತ್ ಅಳವಡಿಕೆ, ಸ್ಮಶಾನ ಅಭಿವೃದ್ಧಿ, ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಸಮರ್ಪಕ ಬೀದಿ ದೀಪ ಅಳವಡಿಕೆ ಹಾಗೂ ಉತ್ಯಮ ನಿರ್ವಹಣೆ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ್ದಾರೆ. 

Share This
300x250 AD
300x250 AD
300x250 AD
Back to top