ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರಡು ದಿನ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಡಿ.14 ಗುರುವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ಕಸ್ತೂರಬಾನಗರ ಪ್ರದೇಶ, ಅಂಡಗಿ ರಸ್ತೆ, ಕರಿಗುಂಡಿ ರಸ್ತೆ ಹಾಗೂ ಬನವಾಸಿ ಹಾಗೂ ಸುಗಾವಿ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಡಿ.15 ಶುಕ್ರವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆ ವರೆಗೆ ಭಾಶಿ, ಅಂಡಗಿ ಹಾಗೂ ತಿಗಣಿ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಕಾಮಗಾರಿ ಪೂರ್ಣಗೊಂಡಲ್ಲಿ ಈ ಮೇಲೆ ತಿಳಿಸಿರುವ ಅವಧಿಯ ಮೊದಲೇ ವಿದ್ಯುತ್ ಸರಬರಾಜು ಮಾಡಲಾಗುತ್ತದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.