Slide
Slide
Slide
previous arrow
next arrow

ಚುನಾವಣೆ ಸಾಮಾಗ್ರಿಗಳ ದರಪಟ್ಟಿ ಸಂಬಂಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ

300x250 AD

ಕಾರವಾರ: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಹಾಗೂ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮಾಡಬೇಕಾದ ಖರ್ಚು ವೆಚ್ಚಗಳ ಕುರಿತ ದರಪಟ್ಟಿ ಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದು, ಅವುಗಳಲ್ಲಿ ಯಾವುದೇ ಸಾಮಗ್ರಿಗಳ ದರ ವ್ಯತ್ಯಾಸ ಕಂಡುಬ0ದರೆ ತಿಳಿಸಬಹುದಾಗಿದೆ ಎಂದರು.

 ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಗಳನ್ನು ಮುದ್ರಣ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

300x250 AD

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಅಧಿಕಾರಿಗಳು, ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top