ದಾಂಡೇಲಿ : ನಗರದ ಪ್ರತಿಷ್ಠಿತ ಶ್ರೀದಾಂಡೇಲಪ್ಪಾ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಸಹಾಯಕ ವ್ಯವಸ್ಥಾಪಕರಾದ ದೇಮಾಣಿ ವೈ ಮಿರಾಶಿ ಅಲ್ಪ ಕಾಲದ ಅನಾರೋಗ್ಯದಿಂದ ಗುರುವಾರ ವಿಧಿವಶರಾದರು. ಮೃತರಿಗೆ 49 ವರ್ಷ ವಯಸ್ಸಾಗಿತ್ತು.
ಕಳೆದ 20 ವರ್ಷಗಳಿಂದ ಶ್ರೀದಾಂಡೇಲಪ್ಪಾ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ ದೇಮಾಣಿ ವೈ ಮಿರಾಶಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಜನಪ್ರೀತಿಯನ್ನು ಗಳಿಸಿದ್ದರು.
ನಗರದ ಸಮೀಪದಲ್ಲಿರುವ ರಾಮಾಪುರದ ನಿವಾಸಿಯಾಗಿರುವ ದೇಮಾಣಿ ವೈ ಮಿರಾಶಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಮೃತರು ತಾಯಿ ಪತ್ನಿ , ಒಂದು ಹೆಣ್ಣು ಮತ್ತು ಓರ್ವ ಪುತ್ರನನ್ನು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.