Slide
Slide
Slide
previous arrow
next arrow

ಡಿ.18ಕ್ಕೆ ಸಿದ್ದಾಪುರದಲ್ಲಿ ಚಂಪಾ ಷಷ್ಠಿ: ವಿವಿಧ ಧಾರ್ಮಿಕ ಕಾರ್ಯಕ್ರಮ

300x250 AD

ಸಿದ್ದಾಪುರ: ಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಚಂಪಾಷಷ್ಠಿಯ ಪ್ರಯುಕ್ತ ಡಿ.18ರಂದು ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜಾ ವಿನಿಯೋಗಗಳು,ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ.

ಡಿ.18ರ ಬೆಳಿಗ್ಗೆಯಿಂದ ರಾತ್ರಿ 8.30ರವರೆಗೆ ಶ್ರೀ ದೇವರಲ್ಲಿ ಕನಕಾಭಿಷೇಕ ಹಾಗೂ ವಿಶೇಷ ಪೂಜಾ ವಿನಿಯೋಗಗಳು ನಂತರ ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಡೆಯುವದು. ಮಧ್ಯಾಹ್ನ 1ರಿಂದ 3ರವರೆಗೆ ಅನ್ನ ಸಂತರ್ಪಣೆ, ಸಂಜೆ 6ರಿಂದ ವಿನಾಯಕ ಕೊಂಡ್ಲಿ ನೇತೃತ್ವದ ತೇಜು ಮೆಲೋಡಿಸ್ ತಂಡದಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ 9ರಿಂದ ಮೆಕ್ಕೆಕಟ್ಟು ಶಿರಿಯೂರಿನ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ರಾಜಾ ಉಗ್ರಸೇನ ಮತ್ತು ಶನೇಶ್ವರ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಳ್ಳುವುದು. ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಪಾಲ್ಗೊಳ್ಳಬೇಕೆಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿ ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top