ಶಿರಸಿ: ತಾಲೂಕಾ ಮಟ್ಟದ ಭಗವದ್ಗೀತಾ ಸ್ಪರ್ಧೆಯನ್ನು ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಸೋಂದಾ ಇವರ ವತಿಯಿಂದ ಡಿ.15 ಶುಕ್ರವಾರದಂದು ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಭಗವದ್ಗೀತೆ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದು ಸಾಧನೆ ಗೈದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಲಾವಣ್ಯ ಹೆಗಡೆ ದ್ವಿತೀಯ ,ಪ್ರೌಢಶಾಲಾ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಸಿಂಚನಾ ಶೆಟ್ಟಿ ದ್ವಿತೀಯ, ಹಿರಿಯ ಪ್ರಾಥಮಿಕ ಭಾಷಣ ಸ್ಪರ್ಧೆ ಚಿನ್ಮಯ ಕೆರೆಗೆದ್ದೆ ದ್ವಿತೀಯ ಸ್ಥಾನ ಪಡೆದಿದ್ದು, ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ, ಬೆನ್ನೆಲುಬಾಗಿ ನಿಂತಿರುವ ಪಾಲಕರಿಗೆ, ತರಬೇತಿ ನೀಡಿದ ಸಹ ಶಿಕ್ಷಕಿ ಶ್ರೀಮತಿ ವಿದ್ಯಾವತಿ ಭಟ್ ಇವರಿಗೆ ಲಯನ್ಸ್ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರು, ಲಯನ್ ಸಮೂಹ ಶಾಲೆಗಳ ಪ್ರಾಚಾರ್ಯರು , ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಕ್ಲಬ್ ಬಳಗ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿ, ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಜೆ.ಎಫ್ .ಲ.ಪ್ರಭಾಕರ ಹೆಗಡೆ, ಕಾರ್ಯದರ್ಶಿ ಲ.ಪ್ರೊ. ರವಿ ನಾಯಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಕೆ.ವಿ. ಭಟ್ಟ, ಲಯನ್ಸ್ ಸಮೂಹ ಶಾಲೆ ಪ್ರಾಂಶುಪಾಲ ಶಶಾಂಕ್ ಹೆಗಡೆ ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.