ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ 2023-24ನೇ ಸಾಲಿನ ಸಮೂಹ ಶಾಲೆಗಳ ಶಾಲಾಂತರ್ಗತ ವಾರ್ಷಿಕ ಕ್ರೀಡಾಕೂಟವನ್ನು ಶಿವರಾಮ ಎಸ್ ಭಟ್ಟ (ಲೋಕೇಶ್ವರ) ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕ್ರೀಡೆ ಜೀವನೋತ್ಸಾಹವನ್ನು ಹಾಗೂ ಆತ್ಮಸ್ಥೈರ್ಯವನ್ನು ತಂದುಕೊಡುತ್ತದೆ. ಅದಕ್ಕೆ ವಯಸ್ಸಿನ ನಿರ್ಬಂಧವಿಲ್ಲ ಎಂದು ಹಲವು ಉದಾಹರಣೆಗಳ ಮೂಲಕ ಕ್ರೀಡಾಪಟುಗಳಲ್ಲಿ ಕ್ರೀಡಾ ಉತ್ಸಾಹ ಚಿಮ್ಮುವಂತೆ ಹಿತ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಧುಕರ ನಾಯಕ ಮಾತನಾಡಿ, ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಎಂದು ಕಿವಿಮಾತು ಹೇಳಿದರು. ಕೊಂಕಣ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷರಾದ ವಿಠ್ಠಲ ಆರ್. ನಾಯಕ ಮಾತನಾಡಿ ವಾರ್ಷಿಕ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಎಸ್. ಎಸ್.ಭಟ್ಟ(ಲೋಕೇಶ್ವರ) ಮತ್ತು ಅವರ ಧರ್ಮಪತ್ನಿ ಹಾಗೂ ಜನತಾ ವಿದ್ಯಾಲಯದ ದೈಹಿಕ ಶಿಕ್ಷಕರಾದ ಮಧುಕರ ನಾಯಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ವಿಠ್ಠಲ ಆರ್ ನಾಯಕ, ಜಂಟಿ ಕಾರ್ಯದರ್ಶಿಗಳಾದ ಶೇಷಗಿರಿ ಶಾನಭಾಗ, ಹಿರಿಯ ವಿಶ್ವಸ್ಥರಾದ ರಮೇಶ ಪ್ರಭು, ರಾಮನಾಥ ಕಿಣ , ಅನಂತ ಶಾನಭಾಗ, ರಾಮಕೃಷ್ಣ ಗೋಳಿ, ಶೈಕ್ಷಣ ಕ ಸಲಹೆಗಾರರಾದ ಆರ್.ಎಚ್. ದೇಶಭಂಡಾರಿ, ವಿಧಾತ್ರಿ ಅಕಾಡೆಮಿಯ ಗುರುರಾಜ್ ಶೆಟ್ಟಿ, ಸಿ.ವಿ.ಎಸ್.ಕೆ ಪ್ರೌಢಶಾಲೆಯ ಮುಖ್ಯಾಧ್ಯಾಪಕಿಯರಾದ ಶ್ರೀಮತಿ ಸುಮಾ ಪ್ರಭು, ಸರಸ್ವತಿ ವಿದ್ಯಾ ಕೇಂದ್ರದ ಮುಖ್ಯಾಧ್ಯಾಪಕಿಯರಾದ ಶ್ರೀಮತಿ ಸುಜಾತಾ ನಾಯ್ಕ ಹಾಗೂ ಬಾಲಮಂದಿರದ ಮುಖ್ಯಾಧ್ಯಾಪಕಿಯರಾದ ಶ್ರೀಮತಿ ಸಾವಿತ್ರಿ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸುಮಾ ಪ್ರಭು ಅವರು ಸ್ವಾಗತಿಸಿದರು. ಶ್ರೀಮತಿ ಸುಜಾತಾ ನಾಯ್ಕ ಅವರು ವಂದಿಸಿದರು. ಶಿಕ್ಷಕರಾದ ಆದರ್ಶ ರೇವಣಕರ ನಿರೂಪಿಸಿದರು. ಅದೇ ರೀತಿ ಕ್ರೀಡಾಕೂಟವನ್ನು ದೈಹಿಕ ಶಿಕ್ಷಕರಾದ ಜಯರಾಜ ಶೇರುಗಾರ, ನಾಗರಾಜ ಭಂಡಾರಿ, ಈಶ್ವರ ಗೌಡ ಹಾಗೂ ಸುಮಂಗಲಾ ನಾಯ್ಕ ಇವರು ಶಿಸ್ತುಬದ್ಧವಾಗಿ ನಡೆಸಿಕೊಟ್ಟರು.