Slide
Slide
Slide
previous arrow
next arrow

ಮೊಬೈಲ್ ತಯಾರಿಕಾ ಘಟಕದಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

300x250 AD

ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ 12ನೇ ತರಗತಿ ವ್ಯಾಸಂಗ ಮಾಡಿರುವ ಮಹಿಳೆಯರಿಗೆ ಆಪಲ್ ಸಂಸ್ಥೆಯ ಮೊಬೈಲ್ ತಯಾರಿಕಾ ಘಟಕದಲ್ಲಿ ಉದ್ಯೋಗ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳು ಸಲ್ಲಿಸಬೇಕಾಗಿರುವ ದಾಖಲಾತಿಗಳು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ್, ರೇಷನ್ ಕಾರ್ಡ್/ ಗುರುತಿನ ಚೀಟಿ, ಬ್ಯಾಂಕ್ ಪಾಸ್ಬುಕ್, ವ್ಯಾಸಂಗ ಪ್ರಮಾಣ ಪತ್ರ (12 ನೇ ತರಗತಿ ಉತ್ತಿರ್ಣರಾಗಿರುವ ಅಂಕಪಟ್ಟಿ), 2 ಪೋಟೋ (ಪಾಸ್ಪೋರ್ಟ್ ಸೈಜ್) ದಾಖಲಾತಿಗಳನ್ನು ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳನ್ನು ಡಿ.16 ರೊಳಗಾಗಿ ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ (08382-226903) ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಸಪಾಯಿ.ಕ.ಅ,ನಿ.ನಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top