ದಾಂಡೇಲಿ: ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಡಿ.17 ರಂದು ವಿಶೇಷ ಪೂಜೆ ಹಾಗೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆಯಿಂದಲೆ ಶ್ರೀ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜಾರಾಧನೆಗಳು ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಅನ್ನಸಂತರ್ಪಣೆ ನಡೆಯಲಿದೆ. ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶ್ರೀ ಅಯ್ಯಪ್ಪ ಸೇವಾ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಅಯ್ಯಪ್ಪ ವೃತದಧಾರಿಗಳು ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.