ಕಾರವಾರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿರುವ ಅಂಕೋಲಾ ಪುರಸಭೆಯ 15 ಮತ್ತು 16 ವಾರ್ಡ್ ಗಳ ವ್ಯಾಪ್ತಿಯಲ್ಲಿ ಮತದಾನ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರಂತೆ ಪ್ರದತ್ತವಾದ ಅಧಿಕಾರದಂತೆ ಈ ವಾರ್ಡ್ಗಳ ವ್ಯಾಪ್ತಿಯಲ್ಲಿ ಡಿ.26 ರಂದು ಸಂಜೆ 5 ಗಂಟೆಯಿ0ದ ಡಿ.27 ರ ಸಂಜೆ 5 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ, ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.