ಕಾರವಾರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ಮತದಾನ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತದಾನದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಚುನಾವಣೆಯನ್ನು ನಡೆಸುವುದಕ್ಕಾಗಿ ಕರ್ನಾಟಕ ಪೌರಸಭೆ ಅಧಿನಿಯಮ 1964ರ ಪ್ರಕರಣ 19 ಹಾಗೂ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ ) ನಿಯಮಗಳು, 1977ರ ನಿಯಮ 3(1) ರನ್ವಯ ಪ್ರದತ್ತವಾದ ಅಧಿಕಾರದಂತೆ ಮತದಾನ ನಡೆಯುವ ಡಿ. 27 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ನಡೆಯಲಿರುವ ಅಂಕೋಲಾ ಪುರಸಭೆ ವಾರ್ಡ್ ನಂ 15 ಮತ್ತು 16 ರ ವ್ಯಾಪ್ತಿಯ ಮತಗಟ್ಟೆ ಕೇಂದ್ರದ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆ ಇತರೆ ಎಲ್ಲ ಜನಸಂದಣಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.