ಕಾರವಾರ: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮವು ಡಿಸೆಂಬರ್ 19 ರಂದು ಬೆಳಗ್ಗೆ 10 ಗಂಟೆಗೆ ಜೋಯಿಡಾ ತಾಲ್ಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ ವ್ಯಾಪ್ತಿಯ ಅಸ್ಸುಳ್ಳಿ ಗ್ರಾಮದ ಗವಳಾದೇವಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.