ಕಾರವಾರ: ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ. ವರ್ಗ ಮತ್ತು ಇತರೆ ಜನಾಂಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಎಸ್.ಸಿ. ಹಾಗೂ ಎಸ್.ಟಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಎಸ್.ಸಿ. ಹಾಗೂ ಎಸ್.ಟಿ ರೂ. 2.50 ಲಕ್ಷ ಹಾಗೂ 2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗ ರೂ. 1.00 ಲಕ್ಷ ಆದಾಯದ ಮಿತಿಯನ್ನು ಹೊಂದಿರಬೇಕು. ವಿದ್ಯಾರ್ಥಿಗಳು ಡಿ. 22 ರೊಳಗಾಗಿ ವೆಬ್ ಸೈಟ್ https://shp.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿbcwd.hostels@karnataka.gov.in ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿಗಳು ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣ ಸಂಖ್ಯೆ: 08382-226588 ಕಚೇರಿ ವೇಳೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.