ಶಿರಸಿ: ಇಲ್ಲಿನ ಲಯನ್ಸ್ ಪ್ರೌಢಶಾಲೆಯಲ್ಲಿ ಡಿ.17, ರವಿವಾರದಂದು, ಏರ್ಪಡಿಸಲಾಗಿದ್ದ ಬೇಸ್ ಫಂಡಾ ಚಾಂಪ್ಸ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸುಘೋಷ ಜೋಶಿ ಪ್ರಥಮ ಬಹುಮಾನವನ್ನು, ಸಾತ್ವಿಕ್ ನಾಗರಾಜ ದ್ವಿತೀಯ ಬಹುಮಾನವನ್ನು ಹಾಗೂ 8ನೇ ತರಗತಿಯ ವಿದ್ಯಾರ್ಥಿ ತುಷಾರ್ ಜೋಶಿ ತೃತೀಯ ಬಹುಮಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.