Slide
Slide
Slide
previous arrow
next arrow

ಬಡ್ಡಿ ಮನ್ನಾ ಸೌಲಭ್ಯದಿಂದ ವಂಚಿತರಾದ ರೈತರು

300x250 AD

ಜೋಯಿಡಾ: ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿರುವುದು ಉತ್ತಮವಾದ ಬೆಳವಣಿಗೆ. ಆದರೆ ಈ ಸೌಲಭ್ಯವನ್ನು ಪಡೆಯಲು ಜೋಯಿಡಾದ ರೈತರು ವಂಚಿತರಾಗಿರುವುದು ತುಂಬಾ ಬೇಸರದ ಸಂಗತಿಯಾಗಿದೆ ಎಂದು ಜೋಯಿಡಾ ತಾಲ್ಲೂಕು ಮರಾಠಾ ಸಮಾಜದ ಅಧ್ಯಕ್ಷರಾದ ಚಂದ್ರಕಾಂತ ದೇಸಾಯಿ ಅವರು ಭಾನುವಾರ ಜೋಯಿಡಾದಲ್ಲಿ ಮಾಧ್ಯಮದ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಜೋಯಿಡಾ ಸೇವಾ ಸಹಕಾರಿ ಸಂಘದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರದಿಂದಾಗಿ ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಸಿಗದೇ ರೈತರಿಗೆ ಸಮಸ್ಯೆಯಾಗಿದೆ. ರೈತರಿಗೆ ಸಾಲ ಕೊಡಬೇಕಾದ ಜೋಯಿಡಾ ಸೇವಾ ಸಹಕಾರಿ ಸಂಘವು ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿದ ಪರಿಣಾಮವಾಗಿ ರೈತರು ಸಾಲದಿಂದ ವಂಚಿತರಾಗಿರುವುದರ ಜೊತೆಗೆ ಇದೀಗ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಸೌಲಭ್ಯದಿಂದಲೂ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಆದಷ್ಟು ಶೀಘ್ರ ಜೋಯಿಡಾ ಸೇವಾ ಸಹಕಾರಿ ಸಂಘದ ಸಮಸ್ಯೆಗಳನ್ನು ಬಗೆಹರಿಸಿ, ಅವ್ಯವಹಾರ ಮಾಡಿದವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು, ಅವ್ಯವಹಾರ ಆಗಿರುವ ಮೊತ್ತವನ್ನು ಸಂಘಕ್ಕೆ ಮರಳಿ ಜಮಾ ಮಾಡಿಸಿ, ಮುಂದಿನ ದಿನಗಳಲ್ಲಿ ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯವನ್ನು ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಸಹಕಾರ ಸಂಘಗಳ ಕಾರ್ಯಾಲಯವು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಚಂದ್ರಕಾಂತ ದೇಸಾಯಿ ಅವರು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top