Slide
Slide
Slide
previous arrow
next arrow

ಜನತಾ ದರ್ಶನ ಮೂಲಕ ಸಮಗ್ರ ಅಭಿವೃದ್ಧಿ ಸಾಧ್ಯ: ಡಿಸಿ ಮಾನಕರ ಅಭಿಪ್ರಾಯ

300x250 AD

ಕಾರವಾರ: ಜನತಾ ದರ್ಶನ ಕಾರ್ಯಕ್ರಮದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವ ಜೊತೆಗೆ ಸಂಬಂಧಪಟ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮಹತ್ವಪೂರ್ಣ ಅಭಿವೃದ್ಧಿ ಕಾರ್ಯಗಳು ಕಾರ್ಯಗತಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಅವರು ಮಂಗಳವಾರ ಜೋಯಿಡಾ ತಾಲೂಕಿನ ಕ್ಯಾಸಲ್ ರಾಕ್ ಹೋಬಳಿಯ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಸ್ಸುಳ್ಳಿ ಗ್ರಾಮದ ಗವಳಾದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಸ್ಸುಳ್ಳಿ ಮತ್ತು ಪಕ್ಕದ ಗ್ರಾಮಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ರಸ್ತೆ, ಸೇತುವೆ, ಕುಡಿಯುವ ನೀರು ಹಾಗೂ ವಸತಿ ಸಂಬಂಧಿತ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಜನಪರ ನಿರ್ಧಾರಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

300x250 AD

ಮಾಜಿ ಶಾಸಕ ಸುನಿಲ್ ಹೆಗಡೆ ಮಾತನಾಡಿ, ಜೋಯಿಡಾ ತಾಲೂಕಿನಲ್ಲಿ ಅರಣ್ಯ ಕಾಯಿದೆ ವ್ಯಾಪ್ತಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕು, ಹಲವು ಅಭಿವೃದ್ಧಿ ಕಾಮಗಾರಿಗಳು ಅರಣ್ಯದ ಕಾರಣ ಅನುಷ್ಠಾನ ಮಾಡಲು ತೊಂದರೆಯಾಗಿದೆ. ಸ್ಥಳೀಯ ಯುವಕರಿಗೆ ಅರಣ್ಯ ಇಲಾಖೆಯ ಹುದ್ದೆಗಳ ನೇಮಕದಲ್ಲಿ ಆದ್ಯತೆ ನೀಡಬೇಕು. ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಜಲ ಜೀವನ್ ಮಿಷನ್ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಆಗಬೇಕು, ಎಲ್ಲಾ ಗ್ರಾಮಗಳಿಗೆ ಅಗತ್ಯ ಬಸ್ ಸೌಲಭ್ಯ ಒದಗಿಸಬೇಕು ಎಂದರು.
ಗ್ರಾಮ ಪಂಚಾಯಿತ್ ಅಧ್ಯಕ್ಷೆ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಉಪ ಸಂರಕ್ಷಣಾಧಿಕಾರಿ ಬಾಲಚಂದ್ರ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜನತಾ ದರ್ಶನದಲ್ಲಿ ಸುಮಾರು 100 ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾದವು. ಆರೋಗ್ಯ ಇಲಾಖೆ ಮೂಲಕ ಉಚಿತ ಆರೋಗ್ಯ ತಪಾಸಣೆ, ಕನ್ನಡಕ ವಿತರಣೆ ಆಯೋಜಿಸಲಾಗಿತ್ತು.

Share This
300x250 AD
300x250 AD
300x250 AD
Back to top