Slide
Slide
Slide
previous arrow
next arrow

ಗ್ರಾಮ ಆಡಳಿತಾಧಿಕಾರಿಗಳು ಪ್ರಾಮಾಣಿಕ ಸೇವೆ ಒದಗಿಸಬೇಕು: ಸಚಿವ ವೈದ್ಯ

300x250 AD

ಕಾರವಾರ: ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಸಿಬ್ಬಂದಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಆಯ್ಕೆಯಾದ 88 ಗ್ರಾಮ ಆಡಳಿತ ಅಧಿಕಾರಿಗಳಿಗೆ ಹಾಗೂ 7 ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.

ಗ್ರಾಮ ಆಡಳಿತ ಅಧಿಕಾರಿಗಳು ಬಡ ಜನರಿಗೆ, ಜನ ಸಾಮಾನ್ಯರಿಗೆ ತಮ್ಮ ಕೈಯಲ್ಲಿ ಸಾಧ್ಯವಾದ ಕೆಲಸಗಳನ್ನು ಮಾಡಿಕೊಡಿ, ತಮ್ಮಿಂದ ಬಗೆಹರಿಸಲು ಸಾಧ್ಯವಾಗದಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಅವರ ಸಮಸ್ಯೆಗಳನ್ನು ಬಗೆಹರಿಸಿ, ಮಾನವೀಯತೆಯ ಆದರ್ಶಗಳನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಜಿಲ್ಲೆಯ ಜನರ ಪ್ರೀತಿಗೆ ಪಾತ್ರರಾಗುವಿರಿ ಎಂದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ 102 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಖಾಲಿ ಇದ್ದು, ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಸದ್ಯ 88 ಸಿಬ್ಬಂದಿಗಳು ಹಾಜರಾಗಿದ್ದು, ಉಳಿದವರಿಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಅವರು ಒಂದು ವೇಳೆ ಕರ್ತವ್ಯಕ್ಕೆ ಬರದಿದ್ದರೆ ಕಾಯ್ದಿರಿಸಿದವರನ್ನು ಆಯ್ಕೆ ಮಾಡಲಾಗುವುದು. ಗ್ರಾಮ ಆಡಳಿತ ಅಧಿಕಾರಿಗಳ ಸೇವೆಗೆ ನೇರ ನೇಮಕಗೊಂಡ ಕೊನೆಯ ಬ್ಯಾಚ್ ಇದಾಗಿದ್ದು, ಪ್ರಸ್ತುತ ನೇರ ನೇಮಕಾತಿ ಮೂಲಕ ಆಯ್ಕೆ ಪ್ರಕ್ರಿಯೆಯನ್ನು ಸರ್ಕಾರ ರದ್ದು ಪಡಿಸಿ ಇನ್ನೂ ಮುಂದೆ ಕೆಪಿಎಸ್‌ಸಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಈಗ ಆಯ್ಕೆಯಾದ ಸಿಬ್ಬಂದಿಗಳು ಜಿಲ್ಲೆಯ ಕಂದಾಯ ಇಲಾಖೆಯ ಆಸ್ತಿಯಾಗಿ ಸೇವೆ ಸಲ್ಲಿಸಬೇಕು. ಇವರಿಗೆ ಸುವ್ಯವಸ್ಥಿತವಾದ ತರಬೇತಿಯನ್ನು ನೀಡಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಭೂ ಹಿಡುವಳಿಗಳ ಮಾಹಿತಿಯನ್ನು ನೊಂದಾಯಿಸಲು ನಿಯೋಜನೆ ಮಾಡಲಾಗಿದೆ. ಈಗಾಗಲೇ ಪ್ರತಿ ದಿನ 60-70 ಮನೆಗಳಿಗೆ ತೆರಳಿ ಶೇ.70 ರಷ್ಟು ಸರ್ವೇ ಕಾರ್ಯ ಮುಗಿಸಲಾಗಿದ್ದು, ಉಳಿದ ಶೇ. 30 ರಷ್ಟು ಸರ್ವೇ ಕಾರ್ಯಗಳನ್ನು 15 ದಿನದೊಳಗೆ ಪೂರ್ಣಗೊಳಿಸಿ, ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಇದ್ದರು.

300x250 AD
Share This
300x250 AD
300x250 AD
300x250 AD
Back to top