ದಾಂಡೇಲಿ : ನಗರದ ಅಂಗಡಿ – ಮುಗ್ಗಟ್ಟುಗಳ, ವಾಣಿಜ್ಯ ಕಟ್ಟಡಗಳ ಮೇಲೆ ಮತ್ತು ಮುಂಭಾಗದಲ್ಲಿ ಅಳವಡಿಸಲಾದ ಆಂಗ್ಲ ಭಾಷೆಯ ನಾಮಫಲಕಗಳನ್ನು ಹಾಗೂ ತಾಲ್ಲೂಕಿನ ವಿವಿದೆಡೆಗಳಲ್ಲಿ ಆಂಗ್ಲ ಭಾಷೆಯಲ್ಲಿ ಹಾಕಲಾದ ರೆಸಾರ್ಟ್, ಹೋಂ ಸ್ಟೇ, ವಸತಿ ಗೃಹಗಳ ಪ್ರಚಾರದ ಬ್ಯಾನರ್‌ಗಳನ್ನು ತೆರವುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ (ನಾ) ಬಣದ ತಾಲೂಕು ಘಟಕದ ಅಧ್ಯಕ್ಷರಾದ ಸಾಧಿಕ್ ಮುಲ್ಲಾ ಆಗ್ರಹಿಸಿದ್ದಾರೆ.
ಅವರು ಗುರುವಾರ ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಆಂಗ್ಲ ಭಾಷೆಯಲ್ಲಿ ಬರೆದ ನಾಮಫಲಕಗಳನ್ನು ತೆರವುಗೊಳಿಸಿ, ಡಿ: 27ರೊಳಗೆ ಶೇ.65 ರಷ್ಟು ಕನ್ನಡ ಭಾಷೆಯಲ್ಲಿ ಬರೆದಿರುವ ನಾಮಫಲಕಗಳನ್ನು ಅಳವಡಿಸಬೇಕು. ಇಲ್ಲದಿದ್ದಲ್ಲಿ ಆಂಗ್ಲ ಭಾಷೆಯಲ್ಲಿ ರಾರಾಜಿಸುತ್ತಿರುವ ನಾಮಫಲಕಗಳನ್ನು ಸಂಘಟನೆಯ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಅಶೋಕ ಮಾನೆ, ರಬ್ಬಾನಿ ದುಕಾನದಾರ, ಸಮೀರ್ ಅಂಕೋಲೆಕರ ಉಪಸ್ಥಿತರಿದ್ದರು.