Slide
Slide
Slide
previous arrow
next arrow

ಭಗವದ್ಗೀತಾ ಸ್ಪರ್ಧೆ: ಶ್ರೀನಿಕೇತನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಇಲ್ಲಿನ ಲಯನ್ಸ್ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಹಶಿಕ್ಷಕರ ಮಾರ್ಗದರ್ಶನದಲ್ಲಿ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಅಪೂರ್ವಾ ಭಟ್, ಭಾಷಣ ಸ್ಪರ್ಧೆಯಲ್ಲಿ 7ನೇ ತರಗತಿಯ ಅಭಿಜ್ಞಾ ಹೆಗಡೆ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಅವ್ಯಕ್ತ ಹೆಗಡೆ ಮತ್ತು ಸುಘೋಷ ಜೋಶಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮಕ್ಕಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top