
ಯಲ್ಲಾಪುರ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಉಪಳೇಶ್ವರದ ಬಳಿ ನಡೆದಿದೆ.
ಶಿರಸಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ಹಾಗೂ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದ್ದು, ವಿದ್ಯುತ್ ಪ್ರವಹಿಸುತ್ತಿದ್ದ ಲೈನ್ ಕಾರಿನ ಮೇಲೆ ಬಿದ್ದು, ಬೆಂಕಿ ಹೊತ್ತಿಕೊಂಡಿದೆ.
ಕಾರು ಹೊತ್ತಿ ಉರಿಯಲಾರಂಭಿಸಿದಾಗ ಕಾರಿನಲ್ಲಿದ್ದವರು ಹೊರಗೆ ಬಂದು, ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರು ತಾಲೂಕಿನ ಬಾಸಲದವರು ಎನ್ನಲಾಗಿದೆ.