
ಹಳಿಯಾಳ : ತಾಲೂಕಿನ ಬಿ.ಕೆ.ಹಳ್ಳಿ ಗ್ರಾಮದಲ್ಲಿ ಡಿ: 29 ರಂದು ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ಶಿವಪ್ಪ ಗುರುಸ್ವಾಮಿ ಮತ್ತು ಆಕಾಶ್ ಗುರುಸ್ವಾಮಿಯವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀಅಯ್ಯಪ್ಪ ಸ್ವಾಮಿ ಭಕ್ತವೃಂದ ವಿನಂತಿಸಿದೆ.