Slide
Slide
Slide
previous arrow
next arrow

ಜಿಲ್ಲಾ ಕಸಾಪದಿಂದ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ಶ್ರೀಪಾದ ಶೆಟ್ಟಿಯವರಿಗೆ ಆಮಂತ್ರಣ

300x250 AD

ಹೊನ್ನಾವರ: ತಾಲೂಕಿನಲ್ಲಿ ಡಿಸೆಂಬರ 27 ಮತ್ತು 28 ರಂದು ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ ಡಾ. ಶ್ರೀಪಾದ ಶೆಟ್ಟಿಯವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಮ್ಮೇಳನದ ಸ್ವಾಗತ ಸಮಿತಿಯವರು ಆಮಂತ್ರಣ ಪತ್ರಿಕೆಯನ್ನು ನೀಡಿ ಅಧಿಕೃತವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆಯವರು ಸಮ್ಮೇಳನದ ಸಿದ್ಧತೆ ಈಗಾಗಲೇ ನಡೆಯುತ್ತಿದ್ದು, ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ತಾವು ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನ ಮುನ್ನಡೆಸಬೇಕು ಎಂದು ಮನವಿ ಮಾಡಿದರು. ಡಾ. ಶ್ರೀಪಾದ ಶೆಟ್ಟಿಯವರು ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಬಗ್ಗೆ ಇಡೀ ಜಿಲ್ಲೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿದೆ. ಜಿಲ್ಲೆಯ ಎಲ್ಲಡೆಯಿಂದ ಸಮ್ಮೇಳನಕ್ಕೆ ಹಿರಿ-ಕಿರಿಯ ಬರಹಗಾರರು, ಸಹೃದಯಿಗಳು ಆಗಮಿಸಲಿದ್ದಾರೆ. ಹೊನ್ನಾವರದಲ್ಲಿ 25 ವರ್ಷಗಳ ನಂತರ ನಡೆಯುತ್ತಿರುವ ಈ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ತಾಲೂಕು ಪಂಚಾಯತ ಕಾರ್ಯನಿರ್ವಣಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ ನಾಯ್ಕ ಮಾತನಾಡಿ ಸಮ್ಮೇಳನವನ್ನ ಯಶಸ್ವಿಗೊಳಿಸುವುದು ಹೊನ್ನಾವರದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅದಕ್ಕಾಗಿ ಈಗಾಗಲೇ ಸ್ವಾಗತ ಸಮಿತಿಯಿಂದ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದರು.

300x250 AD

ಸಮ್ಮೇಳನ ಅಧ್ಯಕ್ಷರಾಗಿ ಆಮಂತ್ರಣ ಸ್ವೀಕರಿಸಿದ ಹಿರಿಯ ಸಾಹಿತಿ ಡಾ. ಶ್ರೀಪಾದ ಶೆಟ್ಟಿಯವರು ತಮಗೆ ದೊರೆತ ಈ ಗೌರವದ ಬಗ್ಗೆ ಅಭಿಮಾನವನ್ನು ವ್ಯಕ್ತಪಡಿಸಿ ಬದುಕಿನಲ್ಲಿ ಇದು ಮರೆಯಲಾಗದ ಸಂದರ್ಭ. ಇದಕ್ಕೆ ಕಾರ್ಣಿಕರ್ತರಾದ ಎಲ್ಲಾ ಸಾಹಿತ್ಯದ ಮನಸ್ಸುಗಳನ್ನ ಅಭಿನಂದಿಸುವುದಾಗಿ ತಿಳಿಸಿದರು.

ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಕಸಾಪ ಹೊನ್ನಾವರ ತಾಲೂಕು ಘಟಕದ ಅಧ್ಯಕ್ಷ ಎಸ್. ಹೆಚ್. ಗೌಡ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ದೀಪಕ ನಾಯ್ಕ,ಯುವಜನ ಸೇವಾ ಕ್ರೀಡಾ ಇಲಾಖೆಯ ಅಧಿಕಾರಿ ಸುಧೀಶ ನಾಯ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಕುಮಾರ ಟಿ. ನಾಯ್ಕ್, ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ. ನಾಯ್ಕ, ಪ್ರಮುಖರಾದ ಎಚ್.ಎಮ್.ಮಾರುತಿ, ಕೋಶಾಧ್ಯಕ್ಷ ನಾರಾಯಣ ಹೆಗಡೆ, ಜನಾರ್ಧನ್ ಕಾಣಕೋಣಕರ್, ರಾಮಗೊಂಡ, ಮಹೇಶ ಭಂಡಾರಿ, ಶ್ರೀಮತಿ ಸುಶೀಲ ಮುಂತಾದವರಿದ್ದರು.

Share This
300x250 AD
300x250 AD
300x250 AD
Back to top