ಶಿರಸಿ: ಭಾರತ ಸೇವಾದಳ ಜಿಲ್ಲಾ ಹಾಗೂ ತಾಲೂಕು ಸಮಿತಿ ಶಿರಸಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಕಾರದೊಂದಿಗೆ ಡಿ:28, ಗುರುವಾರ ಬೆಳಿಗ್ಗೆ 9.30 ಗಂಟೆಗೆ ಭಾರತ ಸೇವಾದಳ ಜಿಲ್ಲಾ ಕಛೇರಿ ಶಿರಸಿಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವುದರೊಂದಿಗೆ ಸೇವಾದಳ ಶತಮಾನೋತ್ಸವ 2023 ನಡೆಸಲು ಉದ್ದೇಶಿಸಿದೆ.
ಈ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ಟಿ. ನಾಯ್ಕ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಲಿದ್ದು, ನಂತರ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 11 ಘಂಟೆಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷರಾದ ವಿ.ಎಸ್. ನಾಯಕ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ದೀಪಾ ಮಾಲಿಂಗಣ್ಣನವರ, ಉಪವಿಭಾಗಾಧಿಕಾರಿ ದೇವರಾಜ ಆರ್., ಉಪನಿರ್ದೇಶಕರು ಪಿ. ಬಸವರಾಜ. ಡಿ.ವೈ.ಎಸ್.ಪಿ ಗಣೇಶ ಕೆ.ಎಲ್.,ತಹಶೀಲ್ದಾರ ಶ್ರೀಧರ ಎಸ್. ಮುಂದಲಮನಿ,ಕಾರ್ಯನಿರ್ವಾಹಕ ಅಧಿಕಾರಿ ಸತೀಶ ಹೆಗಡೆ, ಪೌರಾಯುಕ್ತ ಹೆಚ್. ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಕೇಂದ್ರ ಸಮಿತಿ ಸದಸ್ಯ ಸುರೇಶ್ಚಂದ್ರ ಹೆಗಡೆ, ಕೆಶಿನ್ಮನೆ, ಭಾರತ ಸೇವಾದಳ ತಾಲೂಕು ಸಮಿತಿ ಅಧ್ಯಕ್ಷ ಅಶೋಕ ಬಜಂತ್ರಿ, ಭಾರತ ಸೇವಾದಳ ವಿಶ್ರಾಂತ ದಳಪತಿ ಜೆ.ಎಸ್. ನಾಯ್ಕ, ರಾಘವೇಂದ್ರ ಶೇಟ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಸೇವಾದಳದ ಕಾರ್ಯಕರ್ತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾ ಸಂಘಟಕರಾದ ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ಕೋರಿದ್ದಾರೆ.