ಹಳಿಯಾಳ: ಪ್ರಶಾಂತ ದೇಶಪಾಂಡೆಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಜಿಲ್ಲೆಯಾದ್ಯಂತ ಅವರು ಕೇವಲ ಕಾಂಗ್ರೆಸ್ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಆರ್.ವಿ ದೇಶಪಾಂಡೆ ಹೇಳಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಆದರೆ ಆ ಸಂದರ್ಭದಲ್ಲಿ ಕಾರಣಾಂತರದಿಂದ ಗೆದ್ದಿಲ್ಲ. ಹಾಗಂತ ಅವರು ರಾಜಕೀಯದಿಂದ ವಿಮುಖರಾಗಿಲ್ಲ. ಈಗ ಮತ್ತೆ ಜಿಲ್ಲೆಯಾದ್ಯಂತ ಹಲವಾರು ಕಾರ್ಯಕ್ರಮದಲ್ಲಿ ಸಕ್ರಿಯಾಗಿದ್ದಾರೆ. ಸ್ಪರ್ಧೆಯ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಆರ್ವಿಡಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಉತ್ತಮವಾಗಿದೆ. ಇದಕ್ಕೆ ಮಾಜಿ ಶಾಸಕರ, ಪಕ್ಷದ ಅಧ್ಯಕ್ಷ, ಕಾರ್ಯದರ್ಶಿ, ಚುನಾಯಿತ ಜನಪ್ರತಿನಿಧಿಗಳು ಹಾಗೂ ಇನ್ನಿತರ ಪದಾಧಿಕಾರಿಗಳು ಉತ್ತಮ ಸಂಘಟನೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರ ಕಾಂಗ್ರೆಸ್ ಪಾಲಾಗಲಿದೆ ಮತ್ತು ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಆರ್ವಿಡಿ ವಿಶ್ವಾಸ ವ್ಯಕ್ತಪಡಿಸಿದರು.