ಅಂಕೋಲಾ: ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲು ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಿಸೆಂಬರ್ 25, ಸಂಜೆ 5 ಗಂಟೆಗೆ ಪೂರ್ವಭಾವಿ ಸಭೆ ನಡೆಯಲಿದ್ದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ.ಪಾಟೀಲ್ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ವಿವಿಧ ತಾಲೂಕುಗಳ ಬ್ಲಾಕ್ ಕಾಂಗ್ರೆಸ್ ಪ್ರಮುಖರು, ಕಾಂಗ್ರೆಸ್ ಚುನಾಯಿತ ಜನ ಪ್ರತಿನಿಧಿಗಳು, ಕೊಂಗ್ರೆಸ್ ಮುಖಂಡರು, ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.