Slide
Slide
Slide
previous arrow
next arrow

ದಾಂಡೇಲಿಯಲ್ಲಿ‌ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

300x250 AD

ದಾಂಡೇಲಿ : ಮಾಜಿ ಪ್ರಧಾನಿ ದಿ: ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯನ್ನು ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ದಿ:ಅಟಲ್‌ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಲಾಯಿತು.

ನಂತರ ಮಾತನಾಡಿದ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಚಂದ್ರಕಾಂತ ಕ್ಷೀರಸಾಗರ ಅವರು ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಖ್ಯಾತರಾಗಿರುವ ಅಟಲ್ ಬಿಹಾರಿ ವಾಜಪೇಯಿ ಅವರು ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು. ಅವರ ನಡೆ-ನುಡಿ ಇಂದಿನ ರಾಜಕಾರಣಿಗಳಿಗೆ, ನೇತಾರರಿಗೆ ಆದರ್ಶ ಪ್ರಾಯವಾಗಿದೆ. ಯುವಕರು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

300x250 AD

ಈ ಸಂದರ್ಭದಲ್ಲಿ ವಿಸ್ತಾರಕರಾದ ಪುರಂದರ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಸವರಾಜ ಕಲಶೆಟ್ಟಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಗುರು ಮಠಪತಿ, ಪ್ರಮುಖರಾದ ಶಾರದಾ ಪರಶುರಾಮ, ಮತ್ತು ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು, ನಗರ ಸಭಾ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top