Slide
Slide
Slide
previous arrow
next arrow

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಗೆಲುವು ಸಾಧಿಸಿದ ಲಯನ್ಸ್ ಪ್ರತಿಭೆಗಳು

300x250 AD

ಸಿದ್ದಾಪುರ: ಪಟ್ಟಣದ. ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ಬಹುಮಾನವನ್ನು ಗಳಿಸಿದ್ದಾರೆ.

ಪ್ರಾಥಮಿಕ ವಿಭಾಗದ ಭಗವದ್ಗೀತಾ ಕಂಠಪಾಠದಲ್ಲಿ ಲಾವಣ್ಯ ಹೆಗಡೆ ಪ್ರಥಮ ಸ್ಥಾನ. ಕವನ ವಾಚನದಲ್ಲಿ ಅನ್ಶಿಕಾ ಹೆಗಡೆ ದ್ವಿತೀಯ ಸ್ಥಾನ  ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದ ಭರತನಾಟ್ಯದಲ್ಲಿ ಭುವನಾ ಹೆಗಡೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಲಯನ್ ಸಮೂಹ ಶಾಲೆಗಳ ಪ್ರಾಚಾರ್ಯರು, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿ, ಮುಂದಿನ ಹಂತಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಶುಭ ಹಾರೈಸಿರುತ್ತಾರೆ ಮತ್ತು ಇವರಿಗೆ ಸಹಕರಿಸಿದ, ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕ ಬಂಧುಗಳಿಗೆ, ಪಾಲಕ ಬಂಧುಗಳಿಗೆ ಕೂಡಾ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top