Slide
Slide
Slide
previous arrow
next arrow

ಗುರುಕೃಪಾ ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ನಾಯ್ಕ್ ನಿಧನ

300x250 AD

ಭಟ್ಕಳ: ಇಲ್ಲಿನ ಗುರುಕೃಪಾ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಎಸ್ ನಾಯ್ಕ ಮಣ್ಕುಳಿ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ನಾರಾಯಣ ನಾಯ್ಕ ಗುರುಕೃಪಾ ಪತ್ತಿನ ಸಹಕಾರಿ ಸಂಘದಲ್ಲಿ ಎರಡು ಬಾರಿ ನಿರ್ದೇಶಕರಾಗಿದ್ದು, ಹಾಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಭಟ್ಕಳದ ಜನತಾ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹಲವು ವರ್ಷಗಳಿಂದ ಪಿಗ್ಮಿ ಸಂಗ್ರಾಹಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾರಾಯಣ ನಾಯ್ಕರ ನಿಧನಕ್ಕೆ ಸಚಿವ ಮಂಕಾಳ ವೈದ್ಯ, ಗುರುಕೃಪಾ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕ ವಾಸು ನಾಯ್ಕ ಸೇರಿದಂತೆ ಅನೇಕ ಗಣ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top