ಶಿರಸಿ: ಮಂಗಳೂರು-ಮಡಗಾವ್ ವಂದೇ ಭಾರತ್ ರೈಲು ಸಂಚಾರ ಡಿ.30ರಂದು ಪ್ರಾರಂಭವಾಗಲಿದೆ. ಅಂದು ಬೆಳಿಗ್ಗೆ 11.00 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಿಂದ ವರ್ಚುವಲ್ ವ್ಯವಸ್ಥೆ ಮೂಲಕ ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ 8.30 ಗಂಟೆಗೆ ಮಂಗಳೂರಿನಿಂದ ಹೊರಡುವ ರೈಲು ಸಧ್ಯ ಉಡುಪಿ-ಕಾರವಾರದಲ್ಲಿ ನಿಲುಗಡೆಯಾಗಿ ಮಧ್ಯಾಹ್ನ 1.00 ಗಂಟೆಗೆ ಮಡಗಾಂ ತಲುಪಲಿದೆ. ಪುನಃ ಸಂಜೆ 6.10 ಗಂಟೆಗೆ ಮಡಗಾಂ ದಿಂದ ಹೊರಟ ರೈಲು ರಾತ್ರಿ 10.45 ಕ್ಕೆ ಮಂಗಳೂರು ತಲುಪಲಿದೆ. ನಮ್ಮ ಜಿಲ್ಲೆಯಲ್ಲಿ ವಂದೇ ಭಾರತ್ ರೈಲು ಸಂಚರಿಸಲು ಕಾರಣರಾದ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಅನಂತಕುಮಾರ ಹೆಗಡೆ ಧನ್ಯವಾದ ಸಲ್ಲಿಸಿದ್ದು, ಜಿಲ್ಲೆಯ ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಿದ್ದಾರೆ. ಸದ್ಯ ನಮ್ಮ ಜಿಲ್ಲೆಯಲ್ಲಿ ಕಾರವಾರದಲ್ಲಿ ಮಾತ್ರ ನಿಲುಗಡೆ ಇದ್ದು, ಮುಂದಿನ ದಿನಗಳಲ್ಲಿ ಕುಮಟಾದಲ್ಲಿ ನಿಲುಗಡೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.