Slide
Slide
Slide
previous arrow
next arrow

ಡಿ.29ಕ್ಕೆ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

300x250 AD

ಶಿರಸಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕಾ ಘಟಕ ಶಿರಸಿ ಇದರ ವಾರ್ಷಿಕ ಸರ್ವ ಸಾಧಾರಣಾ ಸಭೆ ಮತ್ತು ತಾಲೂಕ ರಾಜ್ಯ ಸರ್ಕಾರ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭವು ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಡಿ:29 ರಂದು ಮಧ್ಯಾಹ್ನ 3-00 ಗಂಟೆಗೆ ನಡೆಯಲಿದೆ.

ಸಮಾರಂಭವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕಿರಣಕುಮಾರ ಎಚ್. ನಾಯ್ಕ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಅಜ್ಜಯ್ಯ ಜಿ. ಆರ್., ಸಹಾಯಕ ಆಯುಕ್ತ ದೇವರಾಜ ಆರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ, ಉಪ ನಿರ್ದೇಶಕ ಬಸವರಾಜ ಪಿ., ಡಿ.ವೈ.ಎಸ್.ಪಿ.ಗಣೇಶ ಕೆ. ಎಲ್.,ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ. ಬಿ. ಪಿ. ಸತೀಶ, ಕೃಷಿ ಇಲಾಖೆ ಉಪನಿರ್ದೇಶಕ ಟಿ. ಎಚ್. ನಟರಾಜ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಸತೀಶ ಹೆಗಡೆ, ಪೌರಾಯುಕ್ತ ಹೆಚ್. ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ಸಿ. ನಾಯ್ಕ, ತಾಲೂಕಾ ವೈದ್ಯಾಧಿಕಾರಿ ಡಾ. ವಿನಾಯಕ ಭಟ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ ನಾಯ್ಕ ಇವರು ಉಪಸ್ಥಿತರಿರುತ್ತಾರೆ. ಈ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಆಗಮಿಸಬೇಕಾಗಿ ಸಂಘಟಕರು ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top