ಯಲ್ಲಾಪುರ: ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿತು, ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಜಿ.ಎಂ.ನದಾಫ್ ಹೇಳಿದರು.
ಅವರು ತಾಲೂಕಿನ ಭರತನಹಳ್ಳಿಯ ಪ್ರಗತಿ ವಿದ್ಯಾಲಯದಲ್ಲಿ ಬುಧವಾರ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಮನಮುಟ್ಟುವಂತೆ ವಿವರಿಸಿದರು. ಇದೇ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ದೂರ ಇರುವ ಕುರಿತು ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡಿದರು.
ಮುಖ್ಯಾಧ್ಯಾಪಕ ವಿನಾಯಕ ಹೆಗಡೆ, ಆರೋಗ್ಯ ಇಲಾಖೆಯ ಪ್ರದೀಪ, ಕುಂದರಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರೂಪಾಕ್ಷ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.