Slide
Slide
Slide
previous arrow
next arrow

ಜ.9ಕ್ಕೆ ಜೋಯಿಡಾದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

300x250 AD

ಜೋಯಿಡಾ : ಶ್ರೀ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಬೆಳಗಾವಿಯ ಕೆ.ಎಲ್.ಇ ವಿಶ್ವವಿದ್ಯಾಲಯ, ಡಾ: ಪ್ರಭಾಕರ್ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ಜೆ.ಎನ್. ಮೆಡಿಕಲ್ ಕಾಲೇಜ್ ಬೆಳಗಾವಿ, ಸರಕಾರಿ ಆಸ್ಪತ್ರೆ ಜೋಯಿಡಾ ಮತ್ತು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ಹಳಿಯಾಳ ಇವರ ಸಂಯುಕ್ತ ಆಶ್ರಯದಡಿ ಇದೇ ಬರುವ ಜನವರಿ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೋಯಿಡಾ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆಯ ಬೃಹತ್ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಕ್ಷೇತ್ರ ಮೇಲ್ವಿಚಾರಕರಾದ ನಾರಾಯಣ ವಾಡಕರ್ ಅವರು ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಕೆ.ಎಲ್.ಇ ಸಂಸ್ಥೆಯ ಡಾ: ಪ್ರಭಾಕರ್ ಕೋರೆ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಲಿದ್ದು, ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನಾರಾಯಣ ವಾಡಕರ್ ಅವರು ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top