ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಉತ್ತರ ಕನ್ನಡ ಜಿಲ್ಲೆ, ಕಾರವಾರ ಇವರ ಆಶ್ರಯದಲ್ಲಿ , ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ, ಡಿಸೆಂಬರ್ 31 ರಂದು ಸಂಜೆ 7 ಗಂಟೆಗೆ ಕಾರವಾರದ ರವೀಂದ್ರನಾಥ ಠಾಗೂರ್ ಕಡಲತೀರದ ಮಯೂರ ವರ್ಮ ವೇದಿಕೆಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಇಂಡಿಯನ್ ಐಡೆಲ್ ಖ್ಯಾತಿಯ ನಚಿಕೇತ್ ಲೆಲೆ ಮತ್ತು ಮಿಸ್ಮಿ ಭೋಸ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಸಂಗೀತ ಸಂಜೆ ಕಾರ್ಯಕ್ರಮದ ಪ್ರಾಯೋಜಕತ್ವ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಹಾರದ ಮಳಿಗೆಗಳು, ಜಾಹೀರಾತು ಪ್ರದರ್ಶನ ನೀಡಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಅವರ ಮೊ.TEL:+919481060207, TEL:+919742322901ನ್ನು ಸಂಪರ್ಕಿಸಬಹುದಾಗಿದೆ.