ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವು ಡಿ.29 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಅನಂತ ಕುಮಾರ ಹೆಗಡೆ, ಶಾಸಕರಾದ ಆರ್.ವಿ.ದೇಶಪಾಂಡೆ, ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಸತೀಶ್ ಕೆ. ಸೈಲ್, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.