Slide
Slide
Slide
previous arrow
next arrow

ಗುಂದ ಪ್ರೌಢಶಾಲಾ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

300x250 AD

ಜೊಯಿಡಾ: ಸತತವಾಗಿ ನಾಲ್ಕು ವರ್ಷಗಳಿಂದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಪ್ರೌಢ ಶಾಲೆಯ ಶಿಕ್ಷಕ ಶಿಕ್ಷಕಿಯರು ಪಡೆದಿದ್ದು, ಈ ಬಾರಿಯೂ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿಷಯ ಬೋಧಕ ಶಿಕ್ಷಕ, ಶಿಕ್ಷಕಿಯರಿಗೆ ಶಿಕ್ಷಣ ಪರಿಶ್ರಮ ಹಿರಿಮೆಗೆ ಮನ್ನಣೆ ಎಂದು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಗುಂದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜೋಸೆಫ್ ಗೊನ್ಸಾಲ್ವೆಸ್ , ಸಹ ಶಿಕ್ಷಕರಾದ ಪುರುಷೋತ್ತಮ ಏಚ್. ಜಿ , ನವೀನ್ ಶೇಟ್, ದಿವ್ಯಾ ಚೌಹಾಣ್ ಇವರುಗಳಿಗೆ ಪ್ರಶಸ್ತಿ ನೀಡಲಾಗಿದೆ.

ಇದನ್ನು ಡಾ.ಎಚ್.ಎಫ್ ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ ನೀಡುತ್ತಿದ್ದು ಯಲ್ಲಾಪುರದ ವಿಶ್ವದರ್ಶನ ಪ್ರೌಢ ಶಾಲೆಯ ಪ್ರಧಾನ ಸಮಾರಂಭದಲ್ಲಿ ನೀಡಲಾಗಿದೆ. ಇವರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಅಹ್ಮದ್ ಶೇಖ್ ಮತ್ತು ಪ್ರೌಢಶಾಲೆಯ ಅಧ್ಯಕ್ಷ ಅನಂತ ದೇಸಾಯಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top