Slide
Slide
Slide
previous arrow
next arrow

ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿಶ್ವ ಮಾನವ ದಿನಾಚರಣೆ

300x250 AD

ಜೋಯಿಡಾ : ರಾಷ್ಟ್ರಕವಿ ದಿ: ಕುವೆಂಪು ಅವರ ಜನ್ಮ ದಿನಾಚರಣೆಯ ನಿಮಿತ್ತ ಡಿ.೨೯, ಶುಕ್ರವಾರದಂದು ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿಶ್ವಮಾನವ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಕವಿ ದಿ: ಕುವೆಂಪು ಭಾವಚಿತ್ರಕ್ಕೆ ಪುಷ್ಪ ಗೌರವವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ, ಮನುಜ ಮತ ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ, ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ತಮ್ಮ ಕಾಣಿಕೆಯಾಗಿ ಕೊಟ್ಟ ಕುವೆಂಪು, ತಮ್ಮ ಮೇರುಕೃತಿಗಳಿಂದಲೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದವರು. ಕುವೆಂಪು ಅವರು ಸರ್ವ ಸಮಾನತೆಯ ಜೀವನ ತತ್ವವನ್ನು ತನ್ನ ಅದ್ಭುತ ಬರವಣಿಗೆಯ ಮೂಲಕ ಸಮಾಜಕ್ಕೆ ಬೋಧಿಸಿದ್ದಾರೆ ಎಂದರು.

300x250 AD

ಈ ಸಂದರ್ಭದಲ್ಲಿ ಉಪ ತಹಶೀಲ್ದಾರರುಗಳಾದ ಸಂಜೀವ್ ಭಜಂತ್ರಿ, ಸುರೇಶ್ ಒಕ್ಕುಂದ, ಗಣಪತಿ ಮೇತ್ರಿ ಹಾಗೂ ತಹಶೀಲ್ದಾರ್ ಕಾರ್ಯಾಲಯದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top