ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳು ಅಪಘಾತಕ್ಕೀಡಾದಾಗ, ಸಂಸ್ಥೆಯ ವಾಹನಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಪ್ರಸ್ತುತ, ರೂ.3,00,000/- ಅಪಘಾತ ಪರಿಹಾರ ಮೊತ್ತವನ್ನು ನೀಡಲಾಗುತ್ತಿದ್ದು, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ 2024ರ ಜನವರಿ 1 ರಿಂದ ಜಾರಿಗೆ ಬರುವಂತೆ ಅಪಘಾತ ಪರಿಹಾರ ಮೊತ್ತವನ್ನು ರೂ. 10,00,000/- ಕ್ಕೆ ಹೆಚ್ಚಿಸಲಾಗಿದೆ. ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50 ರಿಂದ ರೂ.99 ರ ವರೆಗಿನ ಮುಖಬೆಲೆಯ ಟಿಕೆಟ್ ಪಡೆದು ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ಒಂದು ರೂಪಾಯಿ ಮತ್ತು ರೂ.100 ಹಾಗೂ ಹೆಚ್ಚಿನ ಮುಖಬೆಲೆಯ ಟಿಕೆಟ್ ಪಡೆದು ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ಎರಡು ರೂಪಾಯಿಯಂತೆ ಅಪಘಾತ ಪರಿಹಾರ ವಂತಿಕೆ ಸಂಗ್ರಹಣೆಯನ್ನೂ ಕೂಡಾ ಜನವರಿ-2024 ರಿಂದ ಆರಂಭಿಸಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.