ದಾಂಡೇಲಿ : ರಾಜ್ಯದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಹಳಿಯಾಳ -ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಧಿಕೃತವಾಗಿ ನೇಮಕ ಮಾಡಿ ಈ ಆದೇಶವನ್ನು ಹೊರಡಿಸಿದ್ದಾರೆ. 9ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಆರ್.ವಿ.ದೇಶಪಾಂಡೆ ರಾಜ್ಯದ ಹಿರಿಯ ಶಾಸಕರಾಗಿ ಹಾಗೂ ಅತೀ ಹೆಚ್ಚು ಬಾರಿ ಸಚಿವರಾಗಿಯು ಕಾರ್ಯ ನಿರ್ವಹಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಇದೀಗ ಆರ್ ವಿ ದೇಶಪಾಂಡೆ ಅವರಿಗೆ ಅತ್ಯುನ್ನತ ಹುದ್ದೆಯಾಗಿರುವ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಪದವಿಯನ್ನು ನೀಡಿ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡಲಾಗಿದೆ.